ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ನ0ಜನಗೂಡಿನಲ್ಲಿ ಮಕ್ಕಳ ಪ್ರತಿಭೆ ಅನಾವರಣ

1 min read

ಪ್ರತಿಭೆಗಳು ಕಾರಂಜಿಯ0ತಾಗಬೇಕು

ಹೆಗ್ಗಡಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ನ0ಜನಗೂಡಿನಲ್ಲಿ ಮಕ್ಕಳ ಪ್ರತಿಭೆ ಅನಾವರಣ

ಮಕ್ಕಳ ಪ್ರತಿಭೆ ಗುರುತಿಸಿ ಹೊರ ತರಲು ಪ್ರತಿಭಾ ಕಾರಂಜಿಯ0ತ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಪ್ರತಿಭೆಗಳು ಕಾರಂಜಿಯ0ತಾಗಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜು ಹೇಳಿದರು.

ನಂಜನಗೂಡು ತಾಲ್ಲೂಕಿನ ಹೆಗ್ಗಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹೆಗ್ಗಡಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಬೇಕು ಎಂದು ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ಮಕ್ಕಳಿಗೆ ಅಗತ್ಯವಾದ ತಯಾರಿಯನ್ನು ಸರ್ಕಾರ ಮಾಡುತ್ತಿದೆ. ಮಕ್ಕಳು ಆಗಾಧವಾದ ಪ್ರತಿಭೆಗಳನ್ನು ತಮ್ಮ ಒಡಲಲ್ಲಿಟ್ಟುಕೊಂಡಿದ್ದಾರೆ. ಅವುಗಳನ್ನು ಹೊರಗೆ ತರಲಿಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದರು.

ಮಕ್ಕಳಲ್ಲಿನ ಪ್ರತಿಭೆಗಳನ್ನು ಹೊರಗೆ ತರಲಿಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗುತ್ತವೆ. ಪ್ರತಿಭೆಯನ್ನು ಆರಂಭದಲ್ಲೆ ಗುರುತಿಸುವುದರಿಂದ ಅವರನ್ನು ಉತ್ತಮ ಕಲಾವಿದರನ್ನಾಗಿ ರೂಪಿಸಲು ಸಾಧ್ಯವಾಗುತ್ತದೆ. ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು. ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ನಗಾರಿ ಮೂಲಕ ಪೂರ್ಣಕುಂಭ ದೊಂದಿಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.

ಪ್ರತಿಭಾ ಕಾರಂಜಿ ಅಂಗವಾಗಿ ಶಾಲೆಯ ಆವರಣವನ್ನು ತಳಿರುತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಛದ್ಮವೇಷ, ಕ್ಲೇ ಮಾಡ್ಲಿಂಗ್, ಆಶುಭಾಷಣ ಸ್ಪರ್ಧೆ, ಕಂಠಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಕಥೆ ಹೇಳುವುದು, ಚಿತ್ರಕಲೆ ಮತ್ತು ಬಣ್ಣ ಹಚ್ಚುವಿಕೆ, ಅಭಿನಯ ಗೀತೆ, ಭಕ್ತಿಗೀತೆ, ಜಾನಪದ ಗೀತೆ, ಭಾವಗೀತೆ ನೃತ್ಯ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಮನು, ರುದ್ರಯ್ಯ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಕಾಶ್, ಹುಚ್ಚೇಗೌಡ, ಮಹದೇವಶೆಟ್ಟಿ, ಪಿಡಿಒ ಶರಿಫ್, ನೀಲಿಸಿದ್ದು, ಪರಮೇಶ್, ಚೇತನ್, ಗ್ರಾ.ಪಂ ಕಾರ್ಯದರ್ಶಿ ದೇವರಾಜು, ಪ್ರಸನ್ನ, ನಾರಾಯಣ್, ಪ್ರಭುಸ್ವಾಮಿ, ದೇವಣ್ಣ ಇದ್ದರು.

About The Author

Leave a Reply

Your email address will not be published. Required fields are marked *