ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಸಿಟ್ಟಾದ ಸಿಎಂ ಸಿದ್ದರಾಮಯ್ಯ : ಎಸ್‌‍ಪಿಗೆ ಎಚ್ಚರಿಕೆ, ಡಿಡಿಪಿಐ ಅಮಾನತ್ತು

1 min read

ವಿಜಯನಗರ ಮೋಟಾರು ಕಳ್ಳತನ, ಮಟ್ಕಾ, ಬೆಟ್ಟಿಂಗ್‌, ಜೂಜು ಸೇರಿ ಕಾನೂನು ಬಾಹಿರ ಕ್ರಮಗಳು ಮೂರು ತಿಂಗಳ ಒಳಗೆ ಸ್ಥಗಿತಗೊಳ್ಳಬೇಕು ಇಲ್ಲವಾದರೆ, ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಯವರನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಊರಿನ ಹೊರಗೆ ಇರುವ ಬೋರ್‌ವೆಲ್‌ಗಳ ಮೋಟಾರ್‌ಗಳನ್ನು ಪದೇ ಪದೇ ಕದಿಯಲಾಗುತ್ತಿದೆ ಎಂದು ಅಧಿಕಾರಿಗಳು ಉತ್ತರಿಸಿದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಎಚ್ಚರಿಸಿದ್ದಾರೆ, ಕಳ್ಳತನದ ಬಗ್ಗೆ ಇದುವರೆಗೂ ಏಕೆ ದೂರು ದಾಖಲಿಸಿಲ್ಲ ? ಕಳ್ಳರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇದರಿಂದ ಸರ್ಕಾರಕ್ಕೆ ನಷ್ಟ ಆಗುತ್ತಿದೆ. ಈ ನಷ್ಟಕ್ಕೆ ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದರು.

ಠಾಣಾಧಿಕಾರಿಗಳಿಗೆ ಅವರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳು ಗೊತ್ತಿರುತ್ತವೆ. ಮೋಟಾರ್‌ ಕಳ್ಳರು ಯಾರು ಎನ್ನುವುದು ಗೊತ್ತಿರುತ್ತದೆ. ಆದರೂ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಮಟ್ಕಾ, ಬೆಟ್ಟಿಂಗ್‌, ಜೂಜು ಹೆಚ್ಚಾಗಿದೆ ಎನ್ನುವ ವರದಿ ಇದೆ. ಇವನ್ನೆಲ್ಲಾ ಸಂಪೂರ್ಣವಾಗಿ ನಿಲ್ಲಿಸಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿಯವರು, ಕೇವಲ ನಿಯಂತ್ರಣ ಸಾಲಲ್ಲ. ಸಂಪೂರ್ಣ ನಿಲ್ಲಿಸಬೇಕು. ಅವರವರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ರೀತಿಯ ಅಪರಾಧಗಳಿಗೂ ಠಾಣಾಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇರುತ್ತದೆ. ಆದರೂ ಕ್ರಮ ತೆಗೆದುಕೊಳ್ಳುವುದಿಲ್ಲ. ಮುಂದಿನ ಮೂರು ತಿಂಗಳುಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಬಂದ್‌ ಆಗಬೇಕು. ಇಲ್ಲದಿದ್ದರೆ ಜಿಲ್ಲಾ ರಕ್ಷಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಸೂಚಿಸಿದರು.

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ 10 ನೇ ಸ್ಥಾನದಿಂದ 27 ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಟ್ಟಾದ ಮುಖ್ಯಮಂತ್ರಿಯವರು, ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಅವರನ್ನು ಪ್ರಶ್ನಿಸಿದರು. ಎಸ್‌‍ಎಸ್‌‍ಎಲ್‌ಸಿ ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಿಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ನೀವೇ ಕಾರಣ. ನಿಮ ಬಿಇಒಗಳು, ಶಿಕ್ಷಕರ ಪ್ರಯತ್ನ ಏನು? ಕಳಪೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಈ ಬಾರಿ ಶೇ.20 ರಷ್ಟು ಗ್ರೇಸ್‌‍ ಅಂಕಗಳನ್ನು ಕೊಟ್ಟರೂ ಫಲಿತಾಂಶ ಈ ಮಟ್ಟಕ್ಕೆ ಕುಸಿದಿದೆ. ಒಟ್ಟು ಸಾಧನೆ ನಿಮಗೆ ಸಮಾಧಾನ ತಂದಿದೆಯೇ ಎಂದು ಪ್ರಶ್ನಿಸಿದರು. 10 ರಿಂದ 27ನೇ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಕುಸಿದಿರುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯದರ್ಶಿಯವರನ್ನು ತರಾಟೆಗೆ ತೆಗೆದುಕೊಂಡರು.

ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್‌ ಅವರನ್ನು ಸಂಪರ್ಕಿಸಿದ ಮುಖ್ಯಮಂತ್ರಿಯವರು, ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್‌‍ ನೀಡಬೇಕು ಎಂದು ಸೂಚಿಸಿದರು. ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು. ಈ ವೇಳೆ ಡಿಡಿಪಿಐ ಅವರನ್ನು ಸಭೆಯಿಂದ ಹೊರಗೆ ನಡೆಯುವಂತೆ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಅವರು ಸೂಚಿಸಿದರು.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *