ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಮೊಬೈಲ್ ಬಳಕೆ
1 min readಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಮೊಬೈಲ್ ಬಳಕೆ
ಗರಂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್
ಜಿಲ್ಲಾ ತ್ರೆಮಾಸಿಕ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳ ಪರಿಹಾರದ ಕುರಿತು ಚರ್ಚೆ ನಡೆಯುತ್ತಿದ್ದರೆ ಕೆಲ ಅಧಿಕಾರಿಗಳು ತಮ್ಮ ಮೊಬೈಲ್‌ನಲ್ಲಿ ಮಗ್ನರಾಗಿರುವುದನ್ನು ಗಮನಿಸಿದ ಸಚಿವ ಸುಧಾಕರ್ ಅಧಿಕಾರಿಗಳ ವಿರುದ್ದ ಗರಂ ಆದ ಘಟನೆಯೂ ನಡೆಯಿತು.
ಇಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಛೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಮೂರು ತಿಂಗಳಿಗೊಮ್ಮೆ ನಡೆಯುವ ತೈಮಾಸಿಕ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದರೆ ಪ್ರತಿ ಇಲಾಖೆ ಅಧಿಕಾರಿಗಳ ಜೊತೆ ದೀರ್ಘ ಚರ್ಚೆ ನಡೆಸಿ, ಮಾಹಿತಿ ಪಡೆಯುತ್ತಿದ್ದರೆ ಸಭೆಯಲ್ಲಿದ್ದ ಕೆಲ ಅಧಿಕಾರಿಗಳು ಮೊಬೈಲ್ ಬಳಕೆಯಲ್ಲಿ ಮಗ್ನರಾಗಿದ್ದರು.
ಇದನ್ನು ಗಮನಿಸಿದ ಸಚಿವ ಸುಧಾಕರ್, ಕಾಟಾಚಾರಕ್ಕೆ ಬಂದು ಸಭೆ ಮಾಡುವ ಆಗಿದ್ದರೆ ಅಧಿಕಾರಿಗಳು ಸಭೆಗೆ ಬರಬೇಡಿ, ತುರ್ತು ಕರೆ ಬಂದ್ರೆ ಮಾತ್ರ ಪ್ರತಿಕ್ರಿಯೆ ನೀಡಿ, ಅದು ಬಿಟ್ಟು ಮೊಬೈಲ್‌ನಲ್ಲಿ ಆಟ ಆಡಿಕೊಂಡು ಇದ್ರೆ ಯಾಕ್ ಬರ್ತಿರಾ ಎಂದು ಅಧಿಕಾರಿಗಳ ವಿರುದ್ಧ ಗರಂ ಆದ್ರು.
ಸಭೆಯಲ್ಲಿ ತೀವ್ರ ಆತಂಕ ಸೃಷ್ಟಿಸಿರುವ ಡೆಂಘೀ ಪ್ರಕರಣಗಳ ಕುರಿತು ಚರ್ಚೆ ನಡೆಯಿತು. ಪ್ರಸ್ತುತ ಮಳೆ ಆಗುತ್ತಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗಾಗಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರಿಗೆ ಡೆಂಘೀ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ಮಾಡಲಾಗುತ್ತಿದೆ. ಮನೆಗಳ ಮುಂದೆ ನೀರು ಶೇಕರಣೆ ಆಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಂಡ್ರೆ ಒಳಿತು, ಜಿಲ್ಲೆಯಲ್ಲಿ ಈಗಾಗಲೇ 101 ಡೆಂಘೀ ಪ್ರಕರಣಗಳು ಸಕ್ರಿಯವಾಗಿವೆ. ಹಾಗಾಗಿ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಆರೋಗ್ಯ ಅಧಿಕಾರಿಗಳು ಮಾಹತಿ ನೀಡಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಶಿಡ್ಲಘಟ್ಟ ಶಾಸಕ ರವಿ ಕುಮಾರ್, ಎಂಎಲ್ಸಿ ಅನಿಲ್ ಕುಮಾರ್, ಜಿಲ್ಲಾಧಿಕಾರಿ ರವೀಂದ್ರ, ಎಸ್ಪಿ ಕುಶಾಲ್ ಚೌಕ್ಸಿ, ಸಿಇಒ ತಿಪ್ಪೇಸ್ವಾಮಿ ಹಾಗೂ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.