ನ.29ಕ್ಕೆ ವೀರವನಿತೆ ಒನಕೆ ಓಬವ್ವ ಜಯಂತಿ
1 min readನ.29ಕ್ಕೆ ವೀರವನಿತೆ ಒನಕೆ ಓಬವ್ವ ಜಯಂತಿ
ಅದ್ದೂರಿಯಾಗಿ ಆಚರಿಸಲು ನಿರ್ಧಾರ, ಶಿವಪ್ಪ
ನವೆಂಬರ್ 29ರ ಶುಕ್ರವಾರ ಬಾಗೇಪಲ್ಲಿ ಪಟ್ಟಣದ ದ್ವಾರಕ ಪಾರ್ಟಿ ಹಾಲ್ ನಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಛಲವಾದಿ ಜನಾಂಗದ ಮುಖಂಡ ಶಿವಪ್ಪ, ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.
ನವೆಂಬರ್ 29ರ ಶುಕ್ರವಾರ ಬೆಳಗ್ಗೆ 10.30ಕ್ಕೆ ಗೂಳೂರು ವೃತ್ತದಿಂದ ಮೆರವಣಿಗೆ ಹೊರಟು ಪುರಸಭೆ ವರೆಗೆ ನಡೆಯುತ್ತದೆ. ಜನಾಂಗದ ಗಣ್ಯರಿಂದ ದ್ವಾರಕ ಪಾರ್ಟಿ ಹಾಲ್‌ನಲ್ಲಿ ವೇದಿಕೆ ಕಾರ್ಯಕ್ರಮ ಇರುತ್ತದೆ. ಒನಕೆ ಓಬವ್ವ ಜಯಂತಿಗೆ ಛಲವಾದಿ ಜನಾಂಗದವರೆಲ್ಲೆ ಕೈಜೋಡಿಸಿ ಊರಿನ ಹಬ್ಬದ ರೀತಿಯಲ್ಲಿ ಆಚರಿಸಿ ಒನಕೆ ಓಬವ್ವಳ ಸಾಹಸ, ದಿಟ್ಟತನವನ್ನು ಮುಂದಿನ ಪೀಳಿಗೆಗೆ ಪರಿಚಯಿಸೋಣ ಎಂದರು.
ಪುಷ್ಪಾಲಕೃತ ಸಾರೋಟಿನಲ್ಲಿ ಓಬವ್ವಳ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳ ಮೆರವಣಿಗೆ ಇರುತ್ತದೆ. ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವಿ. ರಮೇಶ್ ಮಾತನಾಡಿ, ಒಬವ್ವ ಜಯಂತಿ ಮೂಲಕ ಛಲವಾದಿ ಜನಾಂಗದವರು ಒಂದೆಡೆ ಸೇರಿ ಸಂಘಟನೆಯಾಗೋಣ. ಇದರಿಂದ ಮುಂದಿನ ಪೀಳಿಗೆಗೆ ಪರಂಪರೆ ಉಳಿಸಿದಂತಾಗುತ್ತದೆ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ರಮೇಶ, ಟಿ. ರಾಮಪ್ಪ, ಆನಂದ್, ನರಸಿಂಹ ಮೂರ್ತಿ ಇದ್ದರು.