ವಿಜಯಪುರ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
1 min read
ವಿಜಯಪುರ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
ಎಲ್ಲ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಚನೆ
ಜನವರಿ ೨೬ ರಂದು ನಡೆಯಲಿರುವ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಎಲ್ಲಾ ಶಾಲಾ ಕಾಲೇಜುಗಳು ಹೆಚ್ಚಿನ ಸಹಕಾರ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ಕೋರಿದರು.
ವಿಜಯಪುರ ರೋಜ್ ಗಾರ್ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್, ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳ ಮಕ್ಕಳು ಕಡ್ಡಾಯವಾಗಿ ಭಾಗವಹಿಸುವಂತೆ ಗಮನಹರಿಸಬೇಕು. ಪಥಸಂಚಲನದೊ0ದಿಗೆ ದ್ವಜಾರೋಹಣ, ಧ್ವಜವಂದನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಲು ಸಿದ್ಧತೆಗಳು ನಡೆಸಿಕೊಳ್ಳಬೇಕಿದೆ. ಯಾವ ಶಾಲಾ ಕಾಲೇಜುಗಳು ಸಮಾರಂಭದಲ್ಲಿ ಭಾಗವಹಿಸುವುದಿಲ್ಲವೋ ಅಂತಹ ಶಾಲಾ ಕಾಲೇಜುಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ವರದಿ ಮಾಡುವುದಾಗಿ ಹೇಳಿದರು.
ಪುರಸಭೆ ಸದಸ್ಯ ವಿ.ನಂದಕುಮಾರ್ ಮಾತನಾಡಿ, ರಾಷ್ಟಿಯ ಹಬ್ಬಕ್ಕೆ ಪ್ರತಿಯೊಬ್ಬ ನಾಗರಿಕರು ಭಾಗವಹಿಸಬೇಕು. ಹಬ್ಬದ ಆಚರಣೆಗೆ ಪುರಸಭೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದ್ದು, ಪಟ್ಟಣದ ಜನತೆ ಸಹಕರಿದಬೇಕು ಎಂದರು.
ಪುರಸಭೆ ಅಧಿಕಾರಿ ಆರೋಗ್ಯ ನಿರೀಕ್ಷಕಿ ಲಾವಣ್ಯ, ಅನಿಲ್, ಶಿವನಾಗೇಗೌಡ, ಜನಾರ್ದನ ಎಲ್ಲಾ ಶಾಲೆಗಳ ಮುಖ್ಯಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.