ಶಾಲೆ, ಅಂಗನವಾಡಿಗಳಿಗೆ ಗ್ರಾಪಂ ಅಧ್ಯಕ್ಷರ ಭೇಟಿ
1 min readಶಾಲೆ, ಅಂಗನವಾಡಿಗಳಿಗೆ ಗ್ರಾಪಂ ಅಧ್ಯಕ್ಷರ ಭೇಟಿ
ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳ ಪರಿಶೀಲನೆ
ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಕೋಣನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ ಕುಮಾರ್ ನೇತೃತ್ವದ ತಂಡ ಶಾಲೆಗಳು ಮತ್ತು ಅಂಗನವಾಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಇಂದು ನಡೆಯಿತು.
ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಕೋಣನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ ಕುಮಾರ್ ನೇತೃತ್ವದ ತಂಡ ಇಂದು ತಮ್ಮ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿಗೆ ಶಾಕ್ ನೀಡಿದರು. ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಸಿನ ಮನೆ, ನಾಲ್ಕು ಅಂಗನವಾಡಿ ಕೇಂದ್ರಗಳು, ಶ್ರೀ ಗಂಗಾಭರೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿ ಆಹಾರ ಪದಾರ್ಥಗಳು, ಮಕ್ಕಳ ದಾಖಲಾತಿ, ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣು ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿಗಳ ಜೊತೆ ಇದೇ ವೇಳೆ ಮಾತುಕತೆ ನಡೆಸಿದರು. ಈ ಬಾರಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಶೇಕಡ ನೂರರಷ್ಟು ಫಲಿತಾಂಶ ನೀಡಬೇಕು ಎಂದು ಮುಖ್ಯ ಶಿಕ್ಷಕರಿಗೆ ತಾಕೀತು ಮಾಡಿದರು.ಶ್ರೀ ಗಂಗಾಭರೇಶ್ವರ ಪ್ರೌಢಶಾಲೆಗೆ ಕಾಂಪೌ0ಡ್ ವ್ಯವಸ್ಥೆ ಬೇಕು ಎಂದು ಮನವಿ ಮಾಡಿದ್ದಾರೆ, ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯqವರ ಗಮನಕ್ಕೆ ತಂದು, ಶಿಕ್ಷಣಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗುತ್ತೇನೆ.
ಗ್ರಾಮ ಪಂಚಾಯತಿ ಆಡಳಿತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಯಾವುದೇ ರೀತಿ ಕೊರತೆಗಳು ಬಾರದಂತೆ ಕ್ರಮ ವಹಿಸಲಾಗುತ್ತದೆ. ಮಕ್ಕಳು ತಪ್ಪದೇ ಶಾಲೆಗೆ ಹಾಜರಾಗಿ ಶಿಕ್ಷಣ ಪಡೆಯಬೇಕು. ಶಿಕ್ಷಕರು ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ಪಾಠ ಪ್ರವಚನವನ್ನು ಮಾಡಬೇಕು ಎಂದು ಶಿಕ್ಷಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ವಿದ್ಯಾ ಮಹದೇವಸ್ವಾಮಿ, ರಮೇಶ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಬಸವಣ್ಣ, ಕಾರ್ಯದರ್ಶಿ ಶ್ರೀನಾಥ್ ಇದ್ದರು.