ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯಕ್ಕೆ ಮಾಜಿ ಪ್ರಧಾನಿಗಳ ಭೇಟಿ
1 min read
ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯಕ್ಕೆ ಮಾಜಿ ಪ್ರಧಾನಿಗಳ ಭೇಟಿ
ಪ್ರಧಾನಿಗಳ ಮಾಹಿತಿ, ಅಚ್ಚುಕಟ್ಟುತನ ಕಂಡು ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ನವದೆಹಲಿಯಲ್ಲಿರುವ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ, ಅಲ್ಲಿನ ಪ್ರಧಾನಿಗಳ ಮಾಹಿತಿಯನ್ನು ಕಂಡು ಸಂತಸ ವ್ಯಕತ್ಪಡಿಸಿದರು. ಭಾರತಕ್ಕೆ ತಮ್ಮದೇ ಆದ ಅನನ್ಯ ಕೊಡುಗೆ ನೀಡಿರುವ ಎಲ್ಲಾ ಪ್ರಧಾನಿಗಳ ಮಾಹಿತಿಯನ್ನು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗಿದ್ದು, ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಕೈಗೊಂಡ ಕ್ರಮಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂತಸ ವ್ಯಕ್ತಪಡಿಸಿದರು.
ಪ್ರಧಾನಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಬಗ್ಗೆ ಮಾಜಿ ಪ್ರಧಾನಿಗಳು ಸಂತಸ ವ್ಯಕ್ತಪಡಿಸಿದ್ದು, ಅಲ್ಲಿ ಕಳೆದ ಕ್ಷಣಗಳ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ವಸ್ತು ಸಂಗ್ರಹಾಲಯದ ಅಧಿಕಾರಿಗಳು ಮಾಜಿ ಪ್ರಧಾನಿಗಳನ್ನು ಬರ ಮಾಡಿಕೊಂಡು, ಅಲ್ಲಿನ ಎಲ್ಲಾ ಪ್ರಧಾನಿಗಳ ಕುರಿತಾದ ಮಾಹಿತಿಯನ್ನು ನೀಡಿದರು. ಅಲ್ಲದೆ, ವೀಕ್ಷಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ಮಾಜಿ ಪ್ರಧಾನಿಗಳು ಬರೆದಿದ್ದಾರೆ.