ಮೂರು ದಿನಗಳೊಳಗೆ ಕಿಡಿಗೇಡಿಗಳನ್ನು ಬಂಧಿಸಿ

ನಂಜನಗೂಡಿನಲ್ಲಿ ಉಚಿತ ಸಾಮೂಹಿಕ ವಿವಾಹಗಳು

ರಾಮಪಟ್ಟಣ ರಸ್ತೆ ಅಳತೆ ಕಾರ್ಯಕ್ಕೆ ಸ್ಥಳೀಯರಿಂದ ಅಡ್ಡಿ

ದಲಿತ ಮುಖಂಡರ ಬಂಧಿಸಿ ಬಿಡುಗಡೆಗೊಳಿಸಿದ ಪೊಲೀಸರು

May 23, 2025

Ctv News Kannada

Chikkaballapura

ನೀರಿನ ಪೈಪ್ ಒಡೆದು, ನೀರು ಪೋಲು

1 min read

ನಂಜನಗೂಡು ನಗರದ ತಾಲೂಕು ಆಡಳಿತ ಭವನದಲ್ಲಿ ಶುದ್ಧ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದೆ. ಪೈಪ್ ಲೈನ್ ಸರಿಪಡಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಕಾವೇರಿ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದೇವೆ. ಆದರೆ ತಾಲೂಕು ಕಚೇರಿಯಲ್ಲಿ ಕುಡಿಯುವ ನೀರು ಸಾಕಷ್ಟು ಪ್ರಮಾಣದಲ್ಲಿ ಪೋಲಾಗುತ್ತಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾರ್ವಜನಿಕರು ತಿರುಗಾಡುವ ಜಾಗದಲ್ಲಿ ನೀರು ಹರಿದು ಪಾಚಿ ಕಟ್ಟಿಕೊಂಡಿದೆ. ದಿನ ನಿತ್ಯ ಓಡಾಡುವ ಜನರು ಜಾರಿ ಬೀಳುವ ಸಾಧ್ಯತೆ ಇದೆ. ಸೊಳ್ಳೆಗಳ ವಾಸಸ್ಥಾನ ವಾಗಿದ್ದು, ಕೂಡಲೆ ಅಧಿಕಾರಿಗಳು ಪೈಪ್ ಲೈನ್ ಸರಿಪಡಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಉಪಾಧ್ಯಕ್ಷ ದೊಡ್ಬೇಗೌಡ ಮತ್ತು ಹಸಿರು ಸೇನೆಯ ಯೂತ್ ಅಧ್ಯಕ್ಷ ಮೋಹನ್ ಒತ್ತಾಯಿಸಿದ್ದಾರೆ.

About The Author

Leave a Reply

Your email address will not be published. Required fields are marked *