ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಈ ಬಾರಿಯ ಬಜೆಟ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಸಿಕ್ಕಿದ್ದೇನು?

1 min read

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ತಮ್ಮ ದಾಖಲೆಯ 15ನೆಯ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಚುನಾವಣಾ ವರ್ಷ ಆಗಿರೋದ್ರಿಂದ ಈ ಬಜೆಟ್ ಬಗ್ಗೆ ಜನಸಾಮಾನ್ಯರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು.

ವಿವಿಧ ವಲಯಗಳಿಗೆ ಬಜೆಟ್‌ನಲ್ಲಿ ಅನುದಾನವನ್ನು ಘೋಷಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೂ ಅನುದಾನವನ್ನು ಮೀಸಲಿಡಲಾಗಿದೆ.

ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದು, ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಜೊತೆಗೆ, ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು, ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಘೋಷಿಸಲಾಗಿದ್ದು, Cerebral Palsy, Muscular Dystrophy, Parkinson’s ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನು, ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು, ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನು, ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು ಎಂದಿದ್ದಾರೆ.

ಇನ್ನು, ನಿವೇಶನ ಹೊಂದಿರುವ ವಸತಿ ರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು, ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *