`ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶ ನಿರಾಕರಿಸುವಂತಿಲ್ಲ’ : ಹೈಕೋರ್ಟ್ ಮಹತ್ವದ ಆದೇಶ
1 min readಪತಿ ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶವನ್ನು ನಿರಾಕರಿಸುವಂತಿಲ್ಲ. ಉದ್ಯೋಗ ಕಳೆದುಕೊಂಡಿದ್ದಾನೆ ಎಂಬ ಕಾರಣದಿಂದ ಹೆಂಡತಿಗೆ ಜೀವನಾಂಶ ಕೊಡುವುದನ್ನು ನಿರಾಕರಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಜೀವನಾಂಶದ ಕುರಿತು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪತಿ ಉದ್ಯೋಗ ಕಳೆದುಕೊಂಡರೂ ಪತ್ನಿಗೆ ಜೀವನಾಂಶ ಕೊಡಲೇಬಕು.
ದುಡಿಯಲು ಶಕ್ತಿಯಿರುವ ಪತಿ ಜೀವನಾಂಶ ನೀಡಬೇಕಾಗುತ್ತದೆ. ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಅದೇಶ ಸರಿಯಾಗಿಯೇ ಇದೆ ಎಂದು ಹೈಕೋರ್ಟ್ ಹೇಳಿದೆ.
ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಅದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಯಮಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿ ಈ ಆದೇಶ ಹೊರಡಿಸಿದೆ.
2020 ರಲ್ಲಿ ಪತಿ ಮತ್ತು ಪತ್ನಿ ಮದುವೆಯಾಗಿದ್ದರು. ಆದರೆ ಭಿನ್ನಾಭಿಪ್ರಾಯದಿಂದಾಗಿ ಬೇರ್ಪಟ್ಟಿದ್ದರು. ಇಬ್ಬರೂ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 24 ರ ಅನ್ವಯ ಪತ್ನಿ, ಪತಿಯಿಂದ ಮಧ್ಯಂತರ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ್ದರು. ಕೌಟುಂಬಿಕ ನ್ಯಾಯಾಲಯ ಪತಿಗೆ ಜೀವಾನಾಂಶ ನೀಡುವಂತೆ ಆದೇಶ ಹೊರಡಿಸಿತ್ತು.