ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಕಾಲೇಜು ಕಟ್ಟಡವಿಲ್ಲದೆ ವಿದ್ಯಾರ್ಥಿಗಳ ಪರದಾಟ

1 min read

ಕಾಲೇಜು ಕಟ್ಟಡವಿಲ್ಲದೆ ವಿದ್ಯಾರ್ಥಿಗಳ ಪರದಾಟ
ಕನಿಷ್ಠ ಮೂಲ ಸೌಕರ್ಯಕ್ಕಾಗಿ ಅಂಗಲಾಚಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಕಾಲೇಜಿಗೆ ಬಂದರೆ ಸೊಳ್ಳೆಗಳ ಕಾಟ, ಶೌಚಾಲಯವಿಲ್ಲ, ಶುದ್ಧ ಕುಡಿಯುವ ನೀರಿಲ್ಲ, ಕನಿಷ್ಠ ಮೂಲ ಸೌಕರ್ಯಗಳಂತೂ ಇಲ್ಲವೇ ಇಲ್ಲ. ವಿದ್ಯಾಭ್ಯಾಸಕ್ಕೆ ಕಾಲೇಜಿಗೆ ಕಟ್ಟಡವೇ ಇಲ್ಲ, ಹೀಗೆ ಇಲ್ಲಗಳ ನಡುವೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ ದುಸ್ಥಿತಿ. ಹಾಗಾದರೆ ಯಾವುದು ಆ ಕಾಲೇಜು, ಯಾಕೆ ಅಲ್ಲಿ ಈ ಸಮಸ್ಯೆ ಅಂತೀರಾ, ನೀವೇ ನೋಡಿ.

ವಿದ್ಯಾರ್ಥಿಗಳು ಕಾಲೇಜಿಗೆ ಬಂದರೆ ಸೊಳ್ಳೆಗಳ ಕಾಟ, ಶೌಚಾಲಯವಿಲ್ಲ, ಶುದ್ಧ ಕುಡಿಯುವ ನೀರಿಲ್ಲ, ಕನಿಷ್ಠ ಮೂಲ ಸೌಕರ್ಯಗಳಂತೂ ಇಲ್ಲವೇ ಇಲ್ಲ. ವಿದ್ಯಾಭ್ಯಾಸಕ್ಕೆ ಕಾಲೇಜಿಗೆ ಕಟ್ಟಡವೇ ಇಲ್ಲ, ಹೀಗೆ ಇಲ್ಲಗಳ ನಡುವೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ ದುಸ್ಥಿತಿ. ಇಷ್ಟೆಲ್ಲಾ ಸಮಸ್ಯೆಗಳಿರೋದು ಯಾವುದೋ ಗ್ರಾಮೀಣ ಪ್ರದೇಶದ ಹಿಂದುಳಿದ ಗ್ರಾಮದಲ್ಲಿ ಅಂತ ತಿಳಿಯಬೇಡಿ. ನಮ್ಮ ರಾಜ್ಯದ ಮುಖ್ಯಮಂತ್ರಿ ಇದ್ದಾರಾಲ್ಲ, ಸಿದ್ದರಾಮಯ್ಯ, ಅವರದೇ ತವರು ಜಿಲ್ಲೆಯಲ್ಲಿ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆ, ಹಾಗೂ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರತಿನಿಧಿಸುವ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಥೆ ಇದು. ಸರ್ಕಾರಿ ಶಾಲಾ-ಕಾಲೇಜು ಎಂದರೆ ಮೂಗುಮುರಿಯುತ್ತಿರುವ ಈ ಕಾಲಘಟ್ಟದಲ್ಲಿ ಸರ್ಕಾರಿ ಶಾಲಾ ಕಾಲೇಜುಗಳ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳುನ ವಹಿಸಿರುವುದು ಎದ್ದು ಕಾಣುತ್ತಿದೆ. ಹುಲ್ಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೮೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಈ ಕಾಲೇಜು ಕೇವಲ ವಾಣಿಜ್ಯ ವಿಭಾಗವನ್ನು ಮಾತ್ರ ಹೊಂದಿದೆ. ಕಲಾ ಮತ್ತು  ವಿಭಾಗಗಳನ್ನು ಮುಚ್ಚಲಾಗಿದೆ. ಕಲಾ,  ವಿಭಾಗಗಳಿಲ್ಲದೆ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳತ್ತ ಒಲವು ತೋರಿಸುತ್ತಿದ್ದಾರೆ. ಸುಸಜ್ಜಿತ ಕಟ್ಟಡವಿಲ್ಲದೆ ವಿದ್ಯಾರ್ಥಿಗಳ ಸಂಖ್ಯೆ ವರ್ಷಕ್ಕೆ ಕಡಿಮೆಯಾಗುತ್ತಾ ಬಂದಿದೆ. ಹುಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 414ರ 1 ಎಕರೆ 6 ಗುಂಟೆ ಪ್ರದೇಶದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ನೀಡಲಾಗಿದೆ. ಮಾಜಿ ಶಾಸಕ ಬಿ. ಹರ್ಷವರ್ಧನ್ ಅವರ ಅಧಿಕಾರದ ಅವಧಿಯಲ್ಲಿ ಹುಲ್ಲಹಳ್ಳಿಯ ಸರ್ಕಾರಿ ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ 2018-19ನೇ ಸಾಲಿನಲ್ಲಿ ೧.೩೬ ಕೋಟಿ ರೂ.ಗಳನ್ನು ಅನುದಾನ ಬಿಡುಗಡೆ ಮಾಡಲಾಗಿತ್ತು.

ಅನುದಾನ ಬಿಡುಗಡೆಯಾಗಿ ಮೂರ್ನಾಲ್ಕು ವರ್ಷಗಳೇ ಕಳೆಯುತ್ತಾ ಬಂದರು, ಕಾಲೇಜು ಕಟ್ಟಡ ಮಾತ್ರ ನಿರ್ಮಾಣವಾಗಿಲ್ಲ. ಕಾಲೇಜು ಕಟ್ಟಡವಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ತಾತ್ಕಾಲಿಕವಾಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪಿಯು ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗುತ್ತಿದ್ದು, ಆ ಕಟ್ಟಡಗಳೂ ಮಳೆ ಬಂದರೆ ಸೋರುತ್ತಿವೆ. ಶೌಚಾಲಯ ವ್ಯವಸ್ಥೆ ಇಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕಾಲೇಜಿಗೆ ಬಂದರೆ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂಬ ಆತಂಕ ಕಾಡುತ್ತಿದೆ ಎಂದು ವಿದ್ಯಾರ್ಥಿಗಳು ಅಳವತ್ತುಕೊಡಿದ್ದಾರೆ.

ಕಾಲೇಜಿನಲ್ಲಿ ವ್ಯಾಸಂಗ ಮಡಾತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇನ್ನಾದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ಕಾಲೇಜಿನ ಕೊಠಡಿ ನಿರ್ಮಾಣ ಮಾಡಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಕಲ್ಪಿಸುವವರೇ ಎಂಬುದನ್ನು ಕಾದುನೋಡಬೇಕಿದೆ.

About The Author

Leave a Reply

Your email address will not be published. Required fields are marked *