ಇಂದು ವಿಶ್ವಕಪ್ ಫೈನಲ್ ಅಹಮದಾಬಾದ್‌ನಲ್ಲಿ 6,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳ ನಿಯೋಜನೆ
1 min readಇಂದು ಬಲಿಷ್ಠ ಭಾರತ ಮತ್ತು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ನಡೆಯಲಿದ್ದು, ಈ ಹಿನ್ನೆಲೆ, ಅಹಮದಾಬಾದ್ ನಗರ ಮತ್ತು ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಮುತ್ತ 6,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಗರದ ಮೊಟೆರಾ ಪ್ರದೇಶದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಗ್ರ್ಯಾಂಡ್ ಫಿನಾಲೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿರುವ ಪ್ರಮುಖ ವ್ಯಕ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಸೇರಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಕಮಿಷನರ್ ಜಿಎಸ್ ಮಲಿಕ್ ಹೇಳಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಎಸ್ ಮಲಿಕ್, ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರ ಚಲನವಲನ ಮತ್ತು ಹಲವಾರು ಗಣ್ಯರ ಉಪಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗುಜರಾತ್ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್), ಗೃಹ ರಕ್ಷಕರು ಮತ್ತು ಇತರ ಸಿಬ್ಬಂದಿಗಳೊಂದಿಗೆ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.
“ಮೆಗಾ ಈವೆಂಟ್ ಯಾವುದೇ ತೊಂದರೆಯಿಲ್ಲದೆ ಸಾಗುವುದನ್ನು ಖಚಿತಪಡಿಸಿಕೊಳ್ಳಲು 6,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಈ 6,000 ಸಿಬ್ಬಂದಿಗಳಲ್ಲಿ, ಸುಮಾರು 3,000 ಮಂದಿ ಕ್ರೀಡಾಂಗಣದೊಳಗೆ ನೆಲೆಸಿದ್ದಾರೆ, ಇತರರು ಆಟಗಾರರು ಇರುವ ಹೋಟೆಲ್‌ಗಳಂತಹ ಇತರ ಪ್ರಮುಖ ಸ್ಥಳಗಳಲ್ಲಿ ಕಾವಲು ಕಾಯಲು ನಿಯೋಜಿಸಲಾಗುವುದು ಎಂದು ಹೇಳಿದರು.